alex Certify
ಕನ್ನಡ ದುನಿಯಾ       Mobile App
       

Kannada Duniya

ಪೊಲೀಸ್ ಸರ್ಪಗಾವಲಿನಲ್ಲಿ ಬಿಎಂಟಿಸಿ ಬಸ್ ಸಂಚಾರ

bmtc bus ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರದಿಂದ ಆರಂಭಗೊಂಡಿದ್ದ ರಸ್ತೆ ಸಾರಿಗೆ ನೌಕರರ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿರುವ ಮಧ್ಯೆ ಬೆಂಗಳೂರಿನಲ್ಲಿ ಪೊಲೀಸ್ ಕಾವಲಿನಲ್ಲಿ ಕೆಲ ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿವೆ.

ಶಾಂತಿನಗರದಿಂದ ಮೂರ್ನಾಲ್ಕು ಬಸ್ ಗಳ ಸಂಚಾರ ಆರಂಭಗೊಂಡಿದ್ದು, ತರಬೇತಿನಿರತ ಚಾಲಕ ಹಾಗೂ ನಿರ್ವಾಹಕರನ್ನು ಇದಕ್ಕಾಗಿ ಬಳಸಿಕೊಳ್ಳಲಾಗಿದೆ ಎನ್ನಲಾಗಿದೆ. ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಯಬಹುದೆಂಬ ಭೀತಿಯ ಹಿನ್ನಲೆಯಲ್ಲಿ ಸಂಚಾರ ಆರಂಭಿಸಿರುವ ಎಲ್ಲ ಬಸ್ ಗಳಿಗೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಪ್ರಯಾಣಿಕರಿಗೆ ಬಸ್ ಸಂಚಾರ ಆರಂಭವಾಗಿರುವ ಮಾಹಿತಿ ಇಲ್ಲದಿರುವ ಕಾರಣ ಈ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಈ ಮಧ್ಯೆ ಮಂಡ್ಯದಿಂದ ಮದ್ದೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರವೂ ಆರಂಭಗೊಂಡಿದೆ ಎನ್ನಲಾಗಿದ್ದು, ಇಂದು ರಾತ್ರಿಯೊಳಗೆ ಸಮಸ್ಯೆ ಪರಿಹಾರಕ್ಕೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರಿಗೆ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...