alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲನೆ ವೇಳೆ ಮೊಬೈಲ್ ಬಳಸದಂತೆ ಬಿಎಂಟಿಸಿ ಚಾಲಕರಿಗೆ ಸೂಚನೆ

ಬಿಎಂಟಿಸಿ ಬಸ್ ಚಾಲಕರು ಚಾಲನೆ ವೇಳೆ ಮೊಬೈಲ್ ಬಳಸುತ್ತಿರುವ ಕುರಿತು ಪ್ರಯಾಣಿಕರಿಂದ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಆಡಳಿತ ಮಂಡಳಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ.

ಈ ನಿಟ್ಟಿನಲ್ಲಿ ಸಂಸ್ಥೆ ಕಾರ್ಯ ಪ್ರವೃತ್ತವಾಗಿದ್ದು, ಪ್ರಮುಖ ಬಸ್ ನಿಲ್ದಾಣಗಳಲ್ಲಿ ಚಾಲಕರಿಗೆ ಅರಿವು ಮೂಡಿಸುವ ಅಭಿಯಾನ ಕೈಗೊಳ್ಳಲಾಗಿದೆ.

ಮೈಕ್ ಮೂಲಕ, ಬಸ್ ಚಾಲನೆ ವೇಳೆ ಚಾಲಕರು ತಮ್ಮ ಮೊಬೈಲ್ ಬಳಸದಂತೆ ಮನವಿ ಮಾಡಲಾಗುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಬಸ್ ಚಾಲನೆ ಮಾಡುವಾಗ ಚಾಲಕರು ಮೊಬೈಲ್ ಬಳಸಿದರೆ ಸದ್ಯ ಕೇವಲ 100 ರೂ. ದಂಡ ವಿಧಿಸಲಾಗುತ್ತಿದ್ದು, ಇದನ್ನು ಹೆಚ್ಚಿಸುವ ಕುರಿತೂ ಚಿಂತನೆ ನಡೆಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...