alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಅಪ್ರಾಪ್ತ

rape kl parp

6 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ. ಬಾಲಕಿಯ ಸಂಬಂಧಿಯಾಗಿರುವ ಈತ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ ದೌರ್ಜನ್ಯ ಎಸಗಿದ್ದಾನೆ.

ಅಪ್ರಾಪ್ತನಾಗಿರುವ ಬಾಲಕ ವಿಕೃತ ಮನೋಭಾವ ಹೊಂದಿದ್ದು, ಬಾಲಕಿಯ ಜೊತೆಯಲ್ಲಿ ಸಲುಗೆಯಿಂದ ಇದ್ದನೆನ್ನಲಾಗಿದ್ದು, ಸಂಬಂಧಿಯಾಗಿದ್ದರಿಂದ ಮತ್ತು ಹತ್ತಿರದಲ್ಲೇ ವಾಸವಿದ್ದ ಕಾರಣ ಬಾಲಕಿ ಮನೆಯವರೂ ಆಟವಾಡಿಕೊಂಡಿರಲಿ ಎಂದುಕೊಂಡಿದ್ದರು. ಆದರೆ, ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಮನೆಗೆ ಕರೆದೊಯ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮನೆಗೆ ಬಂದ ಬಾಲಕಿ ಹೊಟ್ಟೆನೋವಾಗಿದೆ ಎಂದು ಪೋಷಕರಿಗೆ ಹೇಳಿದ್ದಾಳೆ.

ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. ನಂತರ ಪೋಷಕರು ಪರಪ್ಪನ ಅಗ್ರಹಾರ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಮುಂದಿನಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...