alex Certify
ಕನ್ನಡ ದುನಿಯಾ       Mobile App
       

Kannada Duniya

6 ವರ್ಷದ ಬಾಲಕನ ಮೇಲೆ ಅಮಾನವೀಯ ಕೃತ್ಯ

crime-top 9963

ಬಾಯಿ ಮಾತಿನಲ್ಲಿ ಬುದ್ಧಿಮಾತು ಹೇಳಬಹುದಾಗಿದ್ದ ಸಣ್ಣ ಕಾರಣವನ್ನೇ ಮುಂದಿಟ್ಟುಕೊಂಡು ಬಾಲಕನೊಬ್ಬನ ಮೇಲೆ ಅಮಾನವೀಯವಾಗಿ ವರ್ತಿಸಿದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. 6 ವರ್ಷದ ಬಾಲಕನ ಗುದದ್ವಾರಕ್ಕೆ ಕೋಲು ಹಾಕಲಾಗಿದೆ.

ಮನೆಯ ಮುಂದೆ 6 ವರ್ಷದ ಬಾಲಕ ಮಲವಿಸರ್ಜನೆ ಮಾಡಿದನೆಂಬ ಕಾರಣಕ್ಕೆ ಗುದದ್ವಾರಕ್ಕೆ ಕೋಲು ಹಾಕಿ ಗಾಯಗೊಳಿಸಲಾಗಿದೆ. ಇದರಿಂದಾಗಿ ಬಾಲಕ ಅಸ್ವಸ್ಥಗೊಂಡಿದ್ದು, ಆತನನ್ನು ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ಸೇರಿಸಲಾಗಿದೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ಸಮೀಪದ ನರಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯ ಮುಂದಿನ ಚರಂಡಿಯಲ್ಲಿ ಬಾಲಕ ಮಲವಿಸರ್ಜನೆ ಮಾಡಿದ್ದಕ್ಕೆ ಆಕ್ರೋಶಗೊಂಡ 21 ವರ್ಷದ ಯುವಕನೊಬ್ಬ ಈ ಕೃತ್ಯ ಎಸಗಿದ್ದಾನೆ.

ಬಾಲಕನ ಗುದದ್ವಾರಕ್ಕೆ ಕೋಲು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ. ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...