alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿಂಗಂ’ ಮನೆಯಲ್ಲೊಂದು ಮನ ಕಲಕುವ ಸ್ಟೋರಿ

mallik bande

ಕಲಬುರ್ಗಿಯಲ್ಲಿ ರೌಡಿಶೀಟರ್ ಒಬ್ಬನನ್ನು ಹಿಡಿಯಲು ಹೋಗಿ ಗುಂಡೇಟಿಗೆ ಬಲಿಯಾದ ರಿಯಲ್ ‘ಸಿಂಗಂ’ ಖ್ಯಾತಿಯ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ ಬಂಡೆ ಅವರ ಮನೆಯಲ್ಲೀಗ ಸಂಕಷ್ಟದ ಪರಿಸ್ಥಿತಿ ಇದೆ. ಆಗ ಪರಿಹಾರ ನೀಡುವುದಾಗಿ ಹೇಳಿದ್ದ ಸರ್ಕಾರ ಪೂರ್ಣ ಮೊತ್ತ ನೀಡಿಲ್ಲ ಎಂದು ಹೇಳಲಾಗಿದೆ.

ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ನೀಡಿದ್ದ ಅರ್ಧಂಬರ್ಧ ಪರಿಹಾರವೆಲ್ಲಾ ಚಿಕಿತ್ಸೆಗೆ ಖರ್ಚಾಗಿದ್ದು, ಮಲ್ಲಿಕಾರ್ಜುನ ಬಂಡೆಯವರ ತಂದೆ ಕರಿಬಸಪ್ಪ ಸರ್ಕಾರ ನಮ್ಮ ಕುಟುಂಬಕ್ಕೆ ನೆರವು ನೀಡಬೇಕೆಂದು ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಅಲ್ಲದೇ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ನೆರವು ಕೋರಿದ್ದಾರೆ.

ಇದಕ್ಕೆ ಸ್ಪಂದಿಸಿದ ಸಿದ್ಧರಾಮಯ್ಯ, ವೈದ್ಯಕೀಯ ಶಿಕ್ಷಣ ಇಲಾಖೆ ಮೂಲಕ ಮಲ್ಲಿಕಾರ್ಜುನ ಬಂಡೆ ಅವರ ಪತ್ನಿಯ ಚಿಕಿತ್ಸಾ ವೆಚ್ಛ ಭರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕರ್ತವ್ಯನಿಷ್ಠೆ ಮೆರೆದ ಹುತಾತ್ಮ ಮಲ್ಲಿಕಾರ್ಜುನ ಬಂಡೆಯವರ ಕುಟುಂಬದವರು ಸಂಕಷ್ಟದಲ್ಲಿದ್ದರೂ ಇದುವರೆಗೆ ಸ್ಪಂದಿಸದಿರುವುದು ಮಾತ್ರ ವಿಪರ್ಯಾಸ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...