alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಎಸ್. ಈಶ್ವರಪ್ಪಗೆ ಬಿ.ಎಸ್.ವೈ. ಮೊದಲ ಶಾಕ್

kse

ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಾಗಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ಅವರ ನಡುವೆ ನಡೆಯುತ್ತಿದ್ದ ಶೀತಲ ಸಮರ ಸ್ಪೋಟಗೊಂಡಿದೆ.

ಈಶ್ವರಪ್ಪಗೆ ಮೊದಲ ಶಾಕ್ ಕೊಟ್ಟಿರುವ ಯಡಿಯೂರಪ್ಪ, ರಾಯಣ್ಣ ಬ್ರಿಗೇಡ್ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಮೂರ್ತಿ ಅವರನ್ನು ಬಿ.ಜೆ.ಪಿ.ಯಿಂದ ಉಚ್ಚಾಟಿಸಿದ್ದಾರೆ.

ಬಿ.ಬಿ.ಎಂ.ಪಿ. ಮಾಜಿ ಮೇಯರ್ ವೆಂಕಟೇಶ ಮೂರ್ತಿ 3 ಬಾರಿ ಕಾರ್ಪೊರೇಟ್ ಆಗಿದ್ದರು. ಅವರನ್ನು ಬಿ.ಜೆ.ಪಿ. ಪಕ್ಷದಿಂದ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಸದಾಶಿವ ಅವರು ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪಕ್ಷ ಸಂಘಟನೆ ವಿಚಾರಕ್ಕೆ ಸಂಬಂಧಿಸಿದಂತೆ ವೆಂಕಟೇಶ ಮೂರ್ತಿ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಆದರೆ, ಈ ಕುರಿತು ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ, ತಮಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ. ಈ ವಿಚಾರವಾಗಿ ಹಿರಿಯ ನಾಯಕರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ವೆಂಕಟೇಶ ಮೂರ್ತಿ ಮಾತನಾಡಿ, ತಮಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ಈಗ ಬರೆದಿರುವ ಪತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ಅಥವಾ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತಾಗಿಯೂ ಪ್ರಸ್ತಾಪಿಸಿಲ್ಲ. ಸಸ್ಪೆಂಡ್ ಮಾಡಿರುವುದನ್ನು ವಾಪಸ್ ಪಡೆಯಬೇಕೆಂದು ಹೇಳಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗಳು ನಿರಂತರವಾಗಿ ನಡೆಯಲಿವೆ. ಅದು ರಾಜಕೀಯೇತರ ಸಂಘಟನೆಯಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...