alex Certify
ಕನ್ನಡ ದುನಿಯಾ       Mobile App
       

Kannada Duniya

ಬಗೆಹರಿಯುತ್ತಾ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ..?

bjp-o

ಕಲಬುರಗಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಡುವೆ ಸಂಘರ್ಷ ತಾರಕಕ್ಕೇರಿದೆ.

ಇಂದಿನಿಂದ ಕಲಬುರಗಿಯಲ್ಲಿ ಆರಂಭವಾಗಲಿರುವ ಕಾರ್ಯಕಾರಿಣಿಯಲ್ಲಿ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳಲು ನಾಯಕರು ತೀರ್ಮಾನಿಸಿದ್ದಾರೆ.

ಉಭಯ ನಾಯಕರು ಇಂದು ಕಾರ್ಯಕಾರಿಣಿಯಲ್ಲಿ ಮುಖಾಮುಖಿಯಾಗಲಿದ್ದು, ಪಕ್ಷದಲ್ಲಿ ವ್ಯಕ್ತವಾಗಿರುವ ಪರ, ವಿರೋಧ ಅಭಿಪ್ರಾಯಗಳಿಗೆ ತೆರೆ ಎಳೆಯಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಯಡಿಯೂರಪ್ಪನವರು, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರದ ಬಗ್ಗೆ ಚರ್ಚೆ ನಡೆಸುವುದಿಲ್ಲ. ಬರ, ವಿಧಾನಸಭೆ ಉಪ ಚುನಾವಣೆ, ಪಕ್ಷದ ಸಂಘಟನೆ ಮೊದಲಾದ ವಿಚಾರವಾಗಿ ಮಾತ್ರ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ತಮಗೆ ಜವಾಬ್ದಾರಿ ವಹಿಸಿದ್ದು, ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...