alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿನಿಮಾ ಮಾಡಲು ಯಾರಿಗೂ ಅನುಮತಿ ಕೊಟ್ಟಿಲ್ಲ’

kalabur-bsy

ಕಲಬುರಗಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೀವಾನಾಧರಿತ ಸಿನಿಮಾ ನಿರ್ಮಾಣಕ್ಕೆ ಬಿ.ಜೆ.ಪಿ. ಮುಖಂಡ ರುದ್ರೇಶ್ ಮುಂದಾಗಿದ್ದರೆಂದು ಹೇಳಲಾಗಿದ್ದು, ಇದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ನಾನು ನನ್ನ ಕುರಿತಾಗಿ ಸಿನಿಮಾ ಮಾಡಲು ಯಾರಿಗೂ ಅನುಮತಿ ಕೊಟ್ಟಿಲ್ಲ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಜನಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ತಮ್ಮ ಜೀವನಾಧಾರಿತ ಸಿನಿಮಾ ನಿರ್ಮಾಣವಾಗುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಯಾರಿಗೂ ಅನುಮತಿ ನೀಡಿಲ್ಲ. ಸಿನಿಮಾ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸಮೀಪದಲ್ಲಿದ್ದು, ಎಲ್ಲರೂ ಚುನಾವಣೆಯ ಬಗ್ಗೆ ಗಮನಹರಿಸಬೇಕಿದೆ. ಸಿನಿಮಾ ನಿರ್ಮಾಣ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.

ಬಿ.ಜೆ.ಪಿ. ಮುಖಂಡ ರುದ್ರೇಶ್ ನಿರ್ಮಾಣದಲ್ಲಿ, ಎಂ.ಎಸ್. ರಮೇಶ್ ನಿರ್ದೇಶನದಲ್ಲಿ ಸಿನಿಮಾ ನಿರ್ಮಾಣವಾಗಲಿದ್ದು, ರಿಯಲ್ ಸ್ಟಾರ್ ಉಪೇಂದ್ರ ಯಡಿಯೂರಪ್ಪ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...