alex Certify
ಕನ್ನಡ ದುನಿಯಾ       Mobile App
       

Kannada Duniya

ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರಕ್ಕಾಗಿ ಆಂತರಿಕ ಕಚ್ಚಾಟ: ಬಿ.ಎಸ್.ವೈ.

ಕಲಬುರಗಿ: ಸಮ್ಮಿಶ್ರ ಸರ್ಕಾರಕ್ಕೆ ಅಭಿವೃದ್ಧಿ ಬೇಕಿಲ್ಲ, ಅಧಿಕಾರಕ್ಕಾಗಿ ನಾಯಕರು ಪರಸ್ಪರ ಆಂತರಿಕವಾಗಿ ಕಚ್ಚಾಡಿಕೊಂದು ಸಾಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರಕಾರದ ನಾಯಕರು ಗೊಂದಲದಲ್ಲಿದ್ದು, ಪರಸ್ಪರ ಕಚ್ಚಾಟದಲ್ಲಿ ತೊಡಗಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳುಗಳು ಕಳೆದಿವೆ ಆದರೂ ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿಲ್ಲ. ಕುರ್ಚಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾಯಕರು ಕಿತ್ತಾಟ ನಡೆಸುತ್ತಿದ್ದಾರೆ ಎಂದರು.

ಇದೇ ವೇಳೆ ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧವೂ ಗುಡುಗಿದ ಬಿ.ಎಸ್.ವೈ., ಲೋಕಸಭೆ ಚುನಾವಣೆಗಾಗಿ ಖರ್ಗೆ ಗಿಮಿಕ್ ಮಾಡುತ್ತಿದ್ದಾರೆ. ಜನರ ಓಲೈಸಲು ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಟ್ರೈಲ್ಯಾಂಡ್ ಮಾಡಿದ್ದಾರೆ ಎಂದು ಆರೋಪಿಸಿದರು. ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣ ಫಲಿತಾಂಶದಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...