alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ರೈತರಿಗೆ ಬಜೆಟ್ ನಲ್ಲಿ ಸಿಗಲಿದೆ ‘ಸಿಹಿ’ ಸುದ್ದಿ

ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ರಾಜ್ಯದ ರೈತರ ಸಾಲ ಮನ್ನಾ ಯೋಜನೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜುಲೈ 5 ರಂದು ಮಂಡಿಸಲಿರುವ ಬಜೆಟ್ ನಲ್ಲಿ ಘೋಷಣೆಯಾಗುವುದು ಖಚಿತವಾಗಿದೆ.

ಮೈತ್ರಿಕೂಟ ಸರ್ಕಾರದ ಭಾಗವಾಗಿರುವ ಕಾಂಗ್ರೆಸ್ ಪಕ್ಷ ಕೂಡಾ, ರಾಜ್ಯದ ಎಲ್ಲ ರೈತರ ಬೆಳೆ ಸಾಲ ಮನ್ನಾ ಮಾಡಲು ಒಪ್ಪಿಗೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಸಾಲ ಮನ್ನಾ ಯೋಜನೆ ಜಾರಿಗೆ ಹಾದಿ ಸುಗಮವಾದಂತಾಗಿದೆ.

ಶುಕ್ರವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದ ವೀರಪ್ಪ ಮೊಯಿಲಿ, ಸಹಕಾರಿ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ ಎಲ್ಲಾ ಬ್ಯಾಂಕ್ ಗಳ ಸಾಲ ಮನ್ನಾ ಮಾಡಲು ತಿಳಿಸಿದ್ದೇವೆ. ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಗಮನಿಸಿ ಮುಖ್ಯಮಂತ್ರಿಗಳು ಇದನ್ನು ಅನುಷ್ಠಾನಗೊಳಿಸಲಿದ್ದಾರೆಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...