alex Certify
ಕನ್ನಡ ದುನಿಯಾ       Mobile App
       

Kannada Duniya

ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ರಕ್ಷಣೆ

ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸವನಹಳ್ಳಿ ಬಳಿ ಇರುವ ನಿರ್ಮಾಣ ಹಂತದ ಕಟ್ಟಡವೊಂದು ಗುರುವಾರ ಸಂಜೆ ಕುಸಿತ ಕಂಡಿದ್ದು, ಅವಶೇಷಗಳಡಿ ಸಿಲುಕಿ ಬಿದ್ದಿರುವ ಕಾರ್ಮಿಕರ ರಕ್ಷಣೆಗೆ ಸಮರೋಪಾದಿಯಲ್ಲಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸುತ್ತಿರುವ ಅಗ್ನಿಶಾಮಕ ಸಿಬ್ಬಂದಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮತ್ತೋರ್ವ ಕಾರ್ಮಿಕನ ರಕ್ಷಣೆ ಮಾಡಿದ್ದಾರೆ.

ಉತ್ತರ ಪ್ರದೇಶದ ಮೂಲದ ಧೀರೇಂದ್ರನಾಥ್ ರಕ್ಷಣೆಗೊಳಗಾದ ಕಾರ್ಮಿಕನಾಗಿದ್ದು, ಗಾಯಗೊಂಡಿರುವ ಈತನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನಿದ್ದ ಸ್ಥಳದ ಬಳಿಯೇ ಮತ್ತೋರ್ವ ಕಾರ್ಮಿಕ ಇರುವುದೂ ಸಹ ಕಾರ್ಯಾಚರಣೆ ವೇಳೆ ಪತ್ತೆಯಾಗಿದ್ದು, ಆತನ ರಕ್ಷಣೆ ಕಾರ್ಯ ನಡೆದಿದೆ.

ಅವಶೇಷಗಳಡಿ ಸಿಲುಕಿರುವ ಈ ಕಾರ್ಮಿಕ ಮಾತನಾಡುತ್ತಿದ್ದು, ಆತ ಧೈರ್ಯಗುಂದಬಾರದೆಂಬ ಕಾರಣಕ್ಕೆ ಆತನೊಂದಿಗೆ ಮಾತನಾಡುತ್ತಲೇ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಅಗ್ನಿಶಾಮಕ ಹಾಗೂ ಎನ್.ಡಿ.ಆರ್.ಎಫ್. ತಂಡದ ಕಾರ್ಯಾಚರಣೆಗೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಈ ಮಧ್ಯೆ ಕಟ್ಟಡದ ಮಾಲೀಕ ಪರಾರಿಯಾಗಿರುವನೆಂದು ಹೇಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...