alex Certify
ಕನ್ನಡ ದುನಿಯಾ       Mobile App
       

Kannada Duniya

ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಬೈಕ್ ಸವಾರ

ಬೆಂಗಳೂರಿನ ಸರ್ಜಾಪುರ ರಸ್ತೆಯ ಕಸವನಹಳ್ಳಿ ಬಳಿ ಇರುವ ನಿರ್ಮಾಣ ಹಂತದ ಕಟ್ಟಡವೊಂದು ಗುರುವಾರ ಸಂಜೆ ಕುಸಿತ ಕಂಡಿದ್ದು, ಈ ದುರ್ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಹಲವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ಹೊರ ತೆಗೆದಿದ್ದು, ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.

ಈ ಮಧ್ಯೆ ಕ್ಯಾಮರಾದಲ್ಲಿ ಸೆರೆಯಾಗಿರುವ ಕಟ್ಟಡ ಕುಸಿಯುವ ದೃಶ್ಯದ ವಿಡಿಯೋ ವೈರಲ್ ಆಗಿದ್ದು, ಮೈ ನಡುಗಿಸುವಂತಿದೆ. ಕಟ್ಟಡ ಕುಸಿಯುವ ಕೆಲ ಸೆಕೆಂಡ್ ಗೂ ಮುನ್ನ ಬೈಕ್ ಸವಾರರೋರ್ವರು ಅಲ್ಲಿ ಸಾಗಿದ್ದು, ಕೂದಲೆಳೆ ಅಂತರದಲ್ಲಿ ದುರಂತದಿಂದ ತಪ್ಪಿಸಿಕೊಂಡಿದ್ದಾರೆ.

ನಡು ರಸ್ತೆಗೆ ಈ ಕಟ್ಟಡ ಕುಸಿದು ಬಿದ್ದಿದ್ದು, ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದರು. ಅಗ್ನಿಶಾಮಕ ದಳ ಹಾಗೂ ಎನ್ ಡಿ ಆರ್ ಎಫ್ ಸಿಬ್ಬಂದಿ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಈಗಾಗಲೇ ಹಲವು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...