alex Certify
ಕನ್ನಡ ದುನಿಯಾ       Mobile App
       

Kannada Duniya

ರೈಲ್ವೇ ಕಟ್ಟಡ ಕುಸಿದು 6 ಮಂದಿ ದಾರುಣ ಸಾವು

building1

ಹುಬ್ಬಳ್ಳಿ: ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದು ಬಿದ್ದು, 6 ಮಂದಿ ದಾರುಣ ಸಾವು ಕಂಡ ಘಟನೆ ಹುಬ್ಬಳ್ಳಿ ನೈರುತ್ಯ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿಯ ಕೇಂದ್ರ ರೈಲ್ವೇ ನಿಲ್ದಾಣದಲ್ಲಿದ್ದ ಈ ಕಟ್ಟಡದಲ್ಲಿ ಪಾರ್ಸೆಲ್ ಕಚೇರಿ, ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿದ್ದವು.

ದಿಢೀರನೆ ಕಟ್ಟಡ ಕುಸಿದುಬಿದ್ದಿದ್ದು, ಕೆಲಸ ಮಾಡುತ್ತಿದ್ದ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿತೀಯ ದರ್ಜೆ ಸಹಾಯಕಿ ದಾಕ್ಷಾಯಿಣಿ ಗೌಡರ್ ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ. ಪೇದೆಗಳಾದ ದೀಕ್ಷಿತ್, ಸಿದ್ಧಯ್ಯ ಹಿರೇಮಠ್ ಎಂಬುವವರು ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಅವಶೇಷಗಳಡಿ ರಕ್ಷಣಾ ಕಾರ್ಯ ಮುಂದುವರೆಸಲಾಗಿದೆ. 5 ದಶಕಕ್ಕಿಂತ ಹೆಚ್ಚು ಹಳೆಯದಾದ ಈ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, 2009ರಲ್ಲಿಯೇ ರೈಲ್ವೆ ಇಲಾಖೆಗೆ ಪತ್ರ ಬರೆಯಲಾಗಿತ್ತು. ಕಟ್ಟಡ ದುರಸ್ತಿ ಮಾಡಿ, ಇಲ್ಲವೇ ಹೊಸ ಕಟ್ಟಡ ನಿರ್ಮಿಸಬೇಕೆಂದು ಕೋರಲಾಗಿತ್ತು.

ಆದರೆ, ರೈಲ್ವೇ ಇಲಾಖೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಎರಡು ಅಂತಸ್ತಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದಿದೆ. ವಿಪತ್ತು ನಿರ್ವಹಣಾ ತಂಡ, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ರೈಲ್ವೇ ರಕ್ಷಣಾದಳದ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಹಲವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಕಟ್ಟಡದ ಒಂದು ಭಾಗದಲ್ಲಿ ದುರಸ್ತಿಗೆ ಗೋಡೆ ಒಡೆಯುವಾಗ ಇಡೀ ಕಟ್ಟಡವೇ ಕುಸಿದುಬಿದ್ದಿದೆ ಎಂದು ಹೇಳಲಾಗಿದೆ. ಇನ್ನೂ ಹಲವರು ಸಿಲುಕಿರಬಹುದಾದ ಸಾಧ್ಯತೆ ಇದ್ದು, ರಕ್ಷಣಾ ಕಾರ್ಯ ಮುಂದುವರೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...