alex Certify
ಕನ್ನಡ ದುನಿಯಾ       Mobile App
       

Kannada Duniya

ಡ್ಯೂಟಿಯಲ್ಲಿದ್ದಾಗಲೇ ಗುಂಡಿಟ್ಟುಕೊಂಡು ಪೇದೆ ಆತ್ಮಹತ್ಯೆ

bullet-featuredಸೆಂಟ್ರಿ ಡ್ಯೂಟಿಯಲ್ಲಿದ್ದಾಗಲೇ ಪೊಲೀಸ್ ಪೇದೆಯೊಬ್ಬರು ತಮ್ಮ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಹೊರ ವಲಯದ ಗಂಗಿಬಾವಿಯಲ್ಲಿರುವ ಕೆ ಎಸ್ ಆರ್ ಪಿ ಬೆಟಾಲಿಯನ್ ನಲ್ಲಿ ನಡೆದಿದೆ.

53 ವರ್ಷದ ಎನ್.ಜಿ. ಮಹೇಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಇವರು ಕಳೆದ ರಾತ್ರಿ ಸೆಂಟ್ರಿ ಡ್ಯೂಟಿಯಲ್ಲಿರುವಾಗ ತಮ್ಮ ಬಳಿಯಿದ್ದ ಎಸ್ಎಲ್ಆರ್ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆಂದು ಹೇಳಲಾಗಿದೆ. ಗಾಯಾಳು ಪೇದೆ ಮಹೇಶ್ವರಪ್ಪರನ್ನು ಚಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕೆ ಎಸ್ ಆರ್ ಪಿ ಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಹೇಶ್ವರಪ್ಪ ಮೂಲತಃ ದಾವಣಗೆರೆ ಜಿಲ್ಲೆ ಹಿರೇಗಂಗೂರು ಗ್ರಾಮದವರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಶಿಗ್ಗಾಂವಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...