alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವು

ckm-acc-bus

ಚಿಕ್ಕಮಗಳೂರು: ಖಾಸಗಿ ಬಸ್ ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಾಳೇಖಾನ್ ಹಳ್ಳಿಯಲ್ಲಿ ನಡೆದಿದೆ.

ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್, ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಮುಂಭಾಗಕ್ಕೆ ಹಾನಿಯಾಗಿದ್ದು, ಮೂವರು ಮೃತಪಟ್ಟಿದ್ದಾರೆ.

11 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ ನಲ್ಲಿ 40 ಪ್ರಯಾಣಿಕರಿದ್ದರು ಎನ್ನಲಾಗಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಕಳಸ ಠಾಣೆ ಪೊಲೀಸರು, ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...