alex Certify BIG NEWS: ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ

ಕೊಪ್ಪಳ: ಖಾಸಗಿ ಬಸ್ ಪಲ್ಟಿಯಾಗಿ ಬಿದ್ದು 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನಡೆದಿದೆ.

ಹೈದರಾಬಾದ್ ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ ಬಸ್ ಗಂಗಾವತಿ ತಾಲೂಕಿನ ಹೇಮಗುಡ್ಡ ಟೋಲ್ ಗೇಟ್ ಬಳಿ ಪಲ್ಟಿಯಾಗಿದೆ. ಬೊಲೆರೊ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್, ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಬಿದ್ದಿದೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗಂಗಾವತಿ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...