alex Certify
ಕನ್ನಡ ದುನಿಯಾ       Mobile App
       

Kannada Duniya

ಕಿಡಿಗೇಡಿಗಳಿಂದ ಬಸ್ ಗೆ ಬೆಂಕಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರ್ಕಾರಿ ಬಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸ್ಥಳೀಯರ ಸಕಾಲಿಕ ಕ್ರಮದಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.

ಗೋಕುಲ್ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರವಿನಗರದಲ್ಲಿ 2 ಬೈಕ್ ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಸಾರಿಗೆ ಸಂಸ್ಥೆ ಬಸ್ ಅಡ್ಡಗಟ್ಟಿದ್ದಾರೆ.

ಮಕ್ಕಳು ಸೇರಿದಂತೆ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಬಾಟಲಿಯಲ್ಲಿದ್ದ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾರೆ. ಕಲ್ಲು ತೂರಿ ಕಿಟಕಿ ಗಾಜುಗಳಿಗೆ ಹಾನಿ ಮಾಡಿ, ಪರಾರಿಯಾಗಿದ್ದಾರೆ.

ಕೂಡಲೇ ಸ್ಥಳೀಯರು, ಬಸ್ ನಿರ್ವಾಹಕ ಮತ್ತು ಚಾಲಕ ನೀರು ಪಡೆದು ಬೆಂಕಿಯನ್ನು ನಂದಿಸಿದ್ದಾರೆ. ಆಕಸ್ಮಾತ್ ಬಸ್ ಗೆ ಬೆಂಕಿ ವ್ಯಾಪಿಸಿದ್ದರೆ, ಹೆಚ್ಚಿನ ಹಾನಿಯಾಗುವ ಸಾಧ್ಯತೆ ಇತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...