alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿಯಲ್ಲಿ ಭಸ್ಮವಾದ 4 ಬಸ್

BUS-FIRE

ತಡರಾತ್ರಿ 4 ಬಸ್ ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಭಸ್ಮವಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೈಸೂರು ರಸ್ತೆಯ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋದಲ್ಲಿ ನಿಲ್ಲಿಸಲಾಗಿದ್ದ 4 ಬಸ್ ಗಳಿಗೆ ತಡರಾತ್ರಿ 2.30ರ ಸುಮಾರಿಗೆ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ.

ಸಾಲಾಗಿ ನಿಲ್ಲಿಸಲಾಗಿದ್ದ ಬಸ್ ಗಳಲ್ಲಿ 2 ರಾಜಹಂಸ ಹಾಗೂ 2 ಸಾರಿಗೆ ಬಸ್ ಗಳಿಗೆ ಬೆಂಕಿ ತಗುಲಿದೆ. ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಮೆಕಾನಿಕ್ ಗಳು ಬೆಂಕಿ ಕಂಡ ಕೂಡಲೇ ಪಕ್ಕದಲ್ಲಿದ್ದ ಬಸ್ ಗಳನ್ನು ಹೊರಗೆ ತೆಗೆದುಕೊಂಡು ಹೋಗಿದ್ದು, ಉಳಿದ ಬಸ್ ಗಳಿಗೂ ಬೆಂಕಿ ತಗುಲುವುದನ್ನು ತಪ್ಪಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಬೆಂಕಿ ತಗುಲಿದ ಬಸ್ ಗಳು ಸಂಪೂರ್ಣ ಹಾಳಾಗಿವೆ.

ಘಟನೆಗೆ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರಬಹುದೆಂದು ಹೇಳಲಾಗಿದೆ. ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಡಿಪೋದಲ್ಲಿದ್ದ ಎಲ್ಲಾ ಬಸ್ ಗಳಿಗೆ ಬೆಂಕಿ ತಗುಲುವ ಸಾಧ್ಯತೆ ಇತ್ತು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...