alex Certify
ಕನ್ನಡ ದುನಿಯಾ       Mobile App
       

Kannada Duniya

KSRTC ಬಸ್ ನಲ್ಲೇ ಸಾಮೂಹಿಕ ಅತ್ಯಾಚಾರ

bus-rape

ಹಾವೇರಿ: ಆಘಾತಕಾರಿ ಘಟನೆಯೊಂದರಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ನಲ್ಲಿಯೇ, ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆ ಉಡುಪಿ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಬಸ್ ಜಪ್ತಿ ಮಾಡಿದ್ದಾರೆ.

ಅಲ್ಲದೇ, ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಕೆ.ಎಸ್.ಆರ್.ಟಿ.ಸಿ. ನಿರ್ವಾಹಕ, ಚಾಲಕ ಸೇರಿ ಮೂವರನ್ನು ಬಂಧಿಸಿದ್ದಾರೆ.

ಜುಲೈ 5 ರಂದು ಅಪ್ರಾಪ್ತೆ ಒಬ್ಬಳೇ ಹಾವೇರಿಗೆ ಬಂದಿದ್ದು, ಈ ಮೂವರು ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬಸ್ ನಲ್ಲಿಯೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಬಾಲಕಿ ಊರಿಗೆ ಹೋದ ಬಳಿಕ ಪೋಷಕರಿಗೆ ವಿಷಯ ತಿಳಿಸಿ ಪೊಲೀಸರಿಗೆ ದೂರು ನೀಡಲಾಗಿದೆ. ಉಡುಪಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಘಟನೆ ಗಮನಕ್ಕೆ ಬಂದ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಕೆಲವರು ಸಂತ್ರಸ್ಥೆಯ ಮನೆಯವರನ್ನು ಸಂಪರ್ಕಿಸಿ ರಾಜಿ ಪಂಚಾಯಿತಿ ನಡೆಸಲು ಮುಂದಾಗಿದ್ದರು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...