alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ 42 ಪ್ರಯಾಣಿಕರ ಸಮೇತ ಬಸ್ ಹೈಜಾಕ್

ಬೆಂಗಳೂರು: ರಾತ್ರಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 42 ಪ್ರಯಾಣಿಕರಿದ್ದ ಖಾಸಗಿ ಬಸ್ ಅನ್ನು ದುಷ್ಕರ್ಮಿಗಳು ಹೈಜಾಕ್ ಮಾಡಿದ್ದಾರೆ.

ಬೆಂಗಳೂರಿನಿಂದ ಕೇರಳಕ್ಕೆ ಹೊರಟಿದ್ದ ಬಸ್ ಹೈಜಾಕ್ ಮಾಡಿದ ದುಷ್ಕರ್ಮಿಗಳು ಗೋದಾಮಿಗೆ ತೆಗೆದುಕೊಂಡು ಹೋಗಿ ನಿಲ್ಲಿಸಿದ್ದಾರೆ. ಆತಂಕಗೊಂಡ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬಸ್ ಹೈಜಾಕ್ ಮಾಡಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಕಲಾಸಿಪಾಳ್ಯದಿಂದ ಹೊರಟಿದ್ದ ಬಸ್ ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಲಕನ ಮೇಲೆ ಹಲ್ಲೆ ಮಾಡಿದ್ದು, ತಾವೇ ಬಸ್ ಚಾಲನೆ ಮಾಡಿಕೊಂಡು ಪಟ್ಟಣಗೆರೆಯ ಗೋದಾಮಿನಲ್ಲಿ ನಿಲ್ಲಿಸಿದ್ದಾರೆ. ಪ್ರಯಾಣಿಕರೊಬ್ಬರು ಮಾಹಿತಿ ನೀಡಿದಾಗ ಪೊಲೀಸರು ಕೂಡಲೇ ಕಾರ್ಯಾಚರಣೆ ಕೈಗೊಂಡು ಸ್ಥಳಕ್ಕೆ ಆಗಮಿಸಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಮೂವರು ಪರಾರಿಯಾಗಿದ್ದಾರೆ. ಫೈನಾನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಬಸ್ ಹೈಜಾಕ್ ಮಾಡಲಾಗಿತ್ತು ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಮುಂದಿನ ಕ್ರಮ, ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...