alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಕಿ ತಗುಲಿ ಕರಕಲಾಯ್ತು ಚಲಿಸುತ್ತಿದ್ದ ಬಸ್

bus-ff

ಕೊಪ್ಪಳ: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ ಘಟನೆ ಕೊಪ್ಪಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹಲಗೇರಿ ಸಮೀಪ ನಡೆದಿದೆ.

ಖಾಸಗಿ ಬಸ್ ನಲ್ಲಿ 8 ಮಂದಿ ಪ್ರಯಾಣಿಕರು ಹಾಗೂ ಚಾಲಕ ನಿರ್ವಾಹಕ ಇದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಮುಂಡರಗಿಗೆ ಹೊರಟಿದ್ದ ಬಸ್ ಹಲಗೇರಿ ಸಮೀಪ ಬಂದಾಗ, ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಗೆ ವ್ಯಾಪಿಸಿದೆ.

ನೋಡನೋಡುತ್ತಿದ್ದಂತೆಯೇ ಬಸ್ ಸುಟ್ಟು ಹೋಗಿದ್ದು, ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಸಂಪೂರ್ಣ ಸುಟ್ಟುಹೋಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...