alex Certify
ಕನ್ನಡ ದುನಿಯಾ       Mobile App
       

Kannada Duniya

ಚಲಿಸುತ್ತಿದ್ದ ಬಸ್ ನಲ್ಲೇ ನಡೀತು ಅನಿರೀಕ್ಷಿತ ಘಟನೆ

vijpur-bus-herige-e

ವಿಜಯಪುರ: ಚಲಿಸುತ್ತಿದ್ದ ಬಸ್ ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಸ್ ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ.

ವಿಜಯಪುರದಿಂದ ಬಾಗಲಕೋಟೆಗೆ ಹೊರಟಿದ್ದ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಮಹಾರಾಷ್ಟ್ರದ ಲಕ್ಷ್ಮಿ ಪ್ರಯಾಣ ಬೆಳೆಸಿದ್ದಾರೆ.

ಗರ್ಭಿಣಿಯಾಗಿದ್ದ ಲಕ್ಷ್ಮಿಗೆ ಬಸ್ ನಲ್ಲೇ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಸ್ ಚಾಲಕ ಕೂಡಲೇ ಬಸ್ ನಿಲ್ಲಿಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಬಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಬಳಿಕ ತಾಯಿ ಮಗುವನ್ನು ಆಸ್ಪತ್ರೆಗೆ ಸೇರಿಸಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ.

ಬಸ್ ಚಾಲಕನ ಸಮಯ ಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...