alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಮಕ್ಕಳು

bus-fire

ರಾಮನಗರ: ಚಲಿಸುತ್ತಿದ್ದ ಬಸ್ ನಲ್ಲಿ ದಿಢೀರ್ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಶಾಲಾ ಮಕ್ಕಳು ಸೇರಿದಂತೆ ಬಸ್ ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರು ಜಾಲಹಳ್ಳಿಯ ಖಾಸಗಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಬಿ.ಎಂ.ಟಿ.ಸಿ. ಬಸ್ ನಲ್ಲಿ ಮೈಸೂರು, ಶ್ರೀರಂಗಪಟ್ಟಣ ಪ್ರವಾಸಕ್ಕೆ ತೆರಳಿದ್ದು, ಚನ್ನಪಟ್ಟಣ ತಾಲ್ಲೂಕಿನ ಮುದುಗೆರೆ ಬಳಿ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬಸ್ ಇಂಜಿನ್ ನಲ್ಲಿ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಕೂಡಲೇ ಶಿಕ್ಷಕರಿಗೆ ಹೇಳಿ, ಬಸ್ ನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಕೆಳಗೆ ಇಳಿಸಿದ್ದಾರೆ.

ಕ್ಷಣಾರ್ಧದಲ್ಲಿ ಇಡೀ ಬಸ್ ಗೆ ಬೆಂಕಿ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ವಾಹನ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯ ನಂತರ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 3 ಕಿಲೋಮೀಟ್ ವರೆಗೂ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...