alex Certify
ಕನ್ನಡ ದುನಿಯಾ       Mobile App
       

Kannada Duniya

ಉಪ ಚುನಾವಣೆಯ ಫಲಿತಾಂಶ ಕುರಿತು ಗುಪ್ತಚರ ಇಲಾಖೆ ಹೇಳಿದ್ದೇನು…?

ಶನಿವಾರದಂದು ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ. ಮತದಾರ, ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಅಭ್ಯರ್ಥಿಗಳ ಭವಿಷ್ಯವನ್ನು ಈಗಾಗಲೇ ತೀರ್ಮಾನಿಸಿದ್ದು, ಇದು ಮತ ಯಂತ್ರದಲ್ಲಿ ಭದ್ರವಾಗಿದೆ.

ನವೆಂಬರ್ 6 ರ ನರಕ ಚತುರ್ದಶಿಯಂದು ಉಪ ಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಇದರ ಮಧ್ಯೆ ಮತದಾನದ ನಂತರ ಗುಪ್ತಚರ ಇಲಾಖೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಫಲಿತಾಂಶದ ಕುರಿತು ಮಾಹಿತಿ ನೀಡಿದೆ ಎಂದು ಹೇಳಲಾಗಿದೆ.

ಇದರ ಪ್ರಕಾರ ಮಂಡ್ಯ ಮತ್ತು ಬಳ್ಳಾರಿ ಲೋಕಸಭಾ ಹಾಗೂ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಪಾಲಾಗಲಿದೆ ಎಂದು ಹೇಳಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ಮಾತ್ರ ಬಿಜೆಪಿಗೆ ಒಲಿಯಲಿದೆ ಎಂದು ತಿಳಿಸಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಶಿವರಾಮೇಗೌಡ, ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವಿ.ಎಸ್. ಉಗ್ರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ, ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ನ ಅನಿತಾ ಕುಮಾರಸ್ವಾಮಿ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಜಯ ಸಾಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ನಿಖರ ಫಲಿತಾಂಶಕ್ಕಾಗಿ ನವೆಂಬರ್ 6 ರವರೆಗೆ ಕಾಯಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...