alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಪಕ್ಷೇತರರಾಗಿ ಚುನಾಯಿತರಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಗೌಡ ಪಾಟೀಲ್ ಜಯ ಸಾಧಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ಸಹೋದರ ಸುನಿಲ್ ಗೌಡ ಪಾಟೀಲ್ ಬಿಜೆಪಿ ಅಭ್ಯರ್ಥಿ ಗೂಳಪ್ಪ ಶೆಟಗಾರ ವಿರುದ್ದ ಗೆಲುವು ಸಾಧಿಸಿದ್ದಾರೆ. ಚುನಾವಣೆಯಲ್ಲಿ ಜೆಡಿಎಸ್ ಸಹ ಸುನಿಲ್ ಗೌಡ ಪಾಟೀಲ್ ಅವರನ್ನು ಬೆಂಬಲಿಸಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...