alex Certify
ಕನ್ನಡ ದುನಿಯಾ       Mobile App
       

Kannada Duniya

ಉಪ ಚುನಾವಣೆ ಗೆಲ್ಲಲು ಮೂರೂ ಪಕ್ಷಗಳಿಂದ ಭರ್ಜರಿ ಪ್ಲಾನ್

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಮುಂದಿನ ತಿಂಗಳು ನಡೆಯಲಿದೆ. ಮೂರೂ ಪಕ್ಷಗಳು, ಮತದಾರರ ಮನವೊಲಿಕೆಗಾಗಿ ಪ್ರಚಾರ ಕಾರ್ಯಕ್ಕಿಳಿದಿವೆ. ಚುನಾವಣಾ ಉದ್ದೇಶದಿಂದ ದೇವೇಗೌಡ ಹಾಗೂ ಸಿದ್ದರಾಮಯ್ಯ ಜಂಟಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ.

ಜೆಡಿಎಸ್ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಮಂಡ್ಯ ಮತ್ತು ಶಿವಮೊಗ್ಗದಿಂದ ಸ್ಪರ್ಧಿಸಿದೆ. ಹಾಗೇ ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆ ಬೆಂಬಲ ದೊರೆತರೆ, ಬಿಜೆಪಿ ಅಭ್ಯರ್ಥಿಯನ್ನು ಸುಲಭವಾಗಿ ಸೋಲಿಸಬಹುದು ಎಂಬುದು ಗೌಡರ ಲೆಕ್ಕಾಚಾರ. ಹೀಗಾಗಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಜಂಟಿಯಾಗಿ ಪ್ರಚಾರಕ್ಕೆ ಹೋಗುತ್ತಿದ್ದಾರೆ

ಬಳ್ಳಾರಿ ಕ್ಷೇತ್ರದ ಹೂವಿನಹಡಗಲಿಯಿಂದ ಸಿದ್ದರಾಮಯ್ಯ ಇಂದಿನಿಂದ ಪ್ರಚಾರ ಆರಂಭಿಸಿ ನಂತರ ಮಂಡ್ಯ , ಶಿವಮೊಗ್ಗ, ಜಮಖಂಡಿ ಹಾಗೇ ಬಳ್ಳಾರಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಇನ್ನು ಬಿಜೆಪಿ ತಾನೇನು ಕಡಿಮೆ ಇಲ್ಲ ಎಂಬಂತೆ ದೋಸ್ತಿ ಸರ್ಕಾರದ ಅಭ್ಯರ್ಥಿಗಳನ್ನು ಸೋಲಿಸಲು ತಂತ್ರವನ್ನು ಮಾಡಿದೆ. ಇದಕ್ಕಾಗಿ ಸ್ಟಾರ್ ಪ್ರಚಾರಕರ ಪಟ್ಟಿ ಮಾಡಿಟ್ಟುಕೊಂಡಿದ್ದು, ಇದನ್ನು ಸದ್ಯದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...