alex Certify
ಕನ್ನಡ ದುನಿಯಾ       Mobile App
       

Kannada Duniya

ಉಪ ಚುನಾವಣೆ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಕೈಬಿಟ್ಟ ಸರ್ಕಾರ

ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬಸ್ ಪ್ರಯಾಣ ದರವನ್ನು ಏರಿಕೆ ಮಾಡಲು ಮುಂದಾಗಿತ್ತಾದರೂ ಇದೀಗ ಅದಕ್ಕೆ ಕಡಿವಾಣ ಬಿದ್ದಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಸದ್ಯಕ್ಕೆ ದರ ಹೆಚ್ಚಳ ಮಾಡದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸೂಚನೆ ನೀಡಿರುವ ಕಾರಣ ಪ್ರಯಾಣ ದರ ಏರಿಕೆ ಪ್ರಸ್ತಾವ ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.

ಡೀಸೆಲ್ ದರ ಹೆಚ್ಚಳ, ಬಿಡಿಭಾಗಗಳು ದುಬಾರಿಯಾಗಿರುವ ಕಾರಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದ್ದು, ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿತ್ತು. ಇದೀಗ ಉಪ ಚುನಾವಣೆ ಕಾರಣ ಇದಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...