alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಪುಟ ವಿಸ್ತರಣೆ ಬೆನ್ನಲ್ಲೇ ಭಿನ್ನಮತ ಸ್ಪೋಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೇ ಭಿನ್ನಮತ ಸ್ಪೋಟಗೊಂಡಿದೆ.

ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ. ರೇವಣ್ಣ, ಆರ್.ಬಿ. ತಿಮ್ಮಾಪೂರ, ಶಾಸಕಿ ಗೀತಾ ಮಹದೇವಪ್ರಸಾದ್ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಡಳಿತ ಪಕ್ಷ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಜಿ. ಪರಮೇಶ್ವರ್ ಗೈರು ಹಾಜರಾಗಿದ್ದಾರೆ.

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅವರು ಗೈರು ಹಾಜರಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ಅವರನ್ನು ಲಿಂಗಾಯತರ ಕೋಟಾದಡಿ ಸಂಪುಟಕ್ಕೆ ಸೇರಿಸಿಕೊಳ್ಳಲು ಪರಮೇಶ್ವರ್ ತಿಳಿಸಿದ್ದು, ಕೊನೆ ಕ್ಷಣದಲ್ಲಿ ಷಡಕ್ಷರಿ ಕೈಬಿಟ್ಟು ಅವರ ಬದಲಿಗ ಲಿಂಗಾಯತರ ಕೋಟಾದಲ್ಲಿ ಗೀತಾ ಮಹದೇವಪ್ರಸಾದ್ ಅವರನ್ನು ಸಿ.ಎಂ. ಆಯ್ಕೆ ಮಾಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಪರಮೇಶ್ವರ್ ಸೂಚಿಸಿದ್ದ ಹೆಸರನ್ನು ಕೈಬಿಟ್ಟು ಸಿ.ಎಂ. ಇಬ್ರಾಹಿಂ ಅವರಿಗೆ ಸಿದ್ಧರಾಮಯ್ಯ ಆಯ್ಕೆಮಾಡಿದ್ದರು.

ಅಲ್ಲದೇ, ನರೇಂದ್ರ ಸ್ವಾಮಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಪರಮೇಶ್ವರ್ ತಿಳಿಸಿದ್ದರೂ, ಸಿ.ಎಂ. ಪರಿಗಣಿಸಿಲ್ಲ. ಈ ಕಾರಣಗಳಿಂದ ಪರಮೇಶ್ವರ್ ಪ್ರಮಾಣವಚನ ಸಮಾರಂಭದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...