alex Certify
ಕನ್ನಡ ದುನಿಯಾ       Mobile App
       

Kannada Duniya

ಈ ಕಾರಣಕ್ಕಾಗಿ ಮುಂದೂಡಲಾಗುತ್ತಿದೆಯಾ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಒಂದು ತಿಂಗಳ ಕಾಲ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆ, ಜಾರಕಿಹೊಳಿ ಸಹೋದರರ ಅಸಮಾಧಾನ ಮೊದಲಾದ ಕಾರಣಗಳಿಂದಾಗಿ ಸಂಪುಟ ವಿಸ್ತರಣೆ ಮುಂದೂಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕೆಲ ಕಾಂಗ್ರೆಸ್ ನಾಯಕರು ಕೂಡಲೇ ಸಂಪುಟ ವಿಸ್ತರಣೆ ಮಾಡುವಂತೆ ಆಗ್ರಹಿಸಿದರೆ ಇನ್ನು ಕೆಲ ನಾಯಕರು ಅ.15 ಅಥವಾ ಅ.20 ರೊಳಗಾಗಿ ಸಂಪುಟ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದಾರೆ. ಕಾರಣ ಸೆ.20 ರಿಂದ ಅ.5 ರವರೆಗೂ ಪಿತೃಪಕ್ಷ ಇರುವುದರಿಂದ ಆ ವೇಳೆಯಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಒಪ್ಪುವುದಿಲ್ಲ ಎಂಬುದು ಹಲವರ ಅಭಿಮತ.

ಇನ್ನು ಕೆಲ ನಾಯಕರ ಪ್ರಕಾರ ಸಧ್ಯಕ್ಕೆ ಸಂಪುಟ ವಿಸ್ತರಣೆ ಮಾಡದಿರುವುದು ಒಳಿತು. ಕಾರಣ ವಿಧಾನ ಪರಿಷತ್ ಚುನಾವಣೆ ಹಾಗೂ ಬಿಬಿಎಂಪಿ ಮೇಯರ್ ಚುನಾವಣೆ ಬಂದಿರುವ ಹಿನ್ನಲೆಯಲ್ಲಿ ಈಗ ಸಂಪುಟ ವಿಸ್ತರಣೆ ವಿಚಾರಕ್ಕೆ ಕೈ ಹಾಕದಿರುವುದು ಒಳಿತು ಎಂಬ ನಿಲುವು ತಳೆದಿದ್ದಾರೆ. ಇನ್ನು ಜಾರಕಿಹೊಳಿ ಬ್ರದರ್ಸ್ ಅಸಮಾಧಾನ ತಣ್ಣಗಾಗದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಗದವರು ಜಾರಕಿಹೊಳಿ ಬ್ರದರ್ಸ್ ಜತೆ ಕೈಜೋಡಿಸಬಹುದು ಎಂಬ ಭಯದಿಂದಲೂ ಸಧ್ಯ ಸಂಪುಟ ವಿಸ್ತರಣೆ ಮುಂದೂಡಲಾಗುತ್ತಿದೆ. ಸೆಪ್ಟೆಂಬರ್ ಮೂರನೇ ವಾರದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ವಿಸ್ತರಣೆ ಈ ಎಲ್ಲಾ ಕಾರಣಗಳಿಂದಾಗಿ ಇನ್ನೂ ಒಂದು ತಿಂಗಳು ಮುಂದೂಡಲಾಗುತ್ತಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...