alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಪುಟ ವಿಸ್ತರಣೆಗೆ ಹಿಂದೇಟು ಹಾಕುತ್ತಿದೆಯಾ ಜೆಡಿಎಸ್…?

ಹಲವು ದಿನಗಳಿಂದ ಮುಂದೂಡಿಕೊಂಡು ಬರುತ್ತಲೇ ಇರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಈಗ ಮೈತ್ರಿ ಸರ್ಕಾರದ ದೋಸ್ತಿ ಪಕ್ಷ ಕಾಂಗ್ರೆಸ್ ಮನಸ್ಸು ಮಾಡಿದ್ದರೆ, ಜೆಡಿಎಸ್ ಹಿಂದೇಟು ಹಾಕುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್ ಪಕ್ಷದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಚಿವ ಸ್ಥಾನಾಕಾಂಕ್ಷಿಗಳು ಇರುವ ಕಾರಣ, ಒಂದು ವೇಳೆ ಸಂಪುಟ ವಿಸ್ತರಿಸಿದ ಬಳಿಕ ಸ್ಥಾನ ವಂಚಿತರು ಅಸಮಾಧಾನಗೊಳ್ಳಬಹುದು. ಹಾಗೂ ಇದನ್ನು ಬಿಜೆಪಿ ಸಮರ್ಥವಾಗಿ ಬಳಸಿಕೊಂಡು ಅಂತಹ ಶಾಸಕರುಗಳನ್ನು ಸೆಳೆಯುವ ಮೂಲಕ ಸರ್ಕಾರದ ಪದಚ್ಯುತಿಗೆ ಯತ್ನಿಸಬಹುದು ಎಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ ಎನ್ನಲಾಗಿದೆ.

ಆದರೆ ಕಾಂಗ್ರೆಸ್ ಪಕ್ಷದಲ್ಲಿ, ಸಚಿವ ಸ್ಥಾನಾಕಾಂಕ್ಷಿ ಶಾಸಕರುಗಳ ಒತ್ತಡ ಹೆಚ್ಚುತ್ತಿರುವ ಕಾರಣ ಸಂಪುಟ ವಿಸ್ತರಣೆ ಮಾಡುವ ಅನಿವಾರ್ಯತೆ ಎದುರಾಗಿದ್ದು, ಸಚಿವ ಸ್ಥಾನ ಸಿಗದ ಅತೃಪ್ತರಿಗೆ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅಸಮಾಧಾನ ಶಮನಗೊಳಿಸುವ ಲೆಕ್ಕಾಚಾರ ಹಾಕಿದ್ದಾರೆ ಕಾಂಗ್ರೆಸ್ ನಾಯಕರು. ನವೆಂಬರ್ 28ರಂದು ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಲವು ತೋರಿದ್ದು, ಜೆಡಿಎಸ್ ವರಿಷ್ಠ ದೇವೇಗೌಡರೊಂದಿಗಿನ ಮಾತುಕತೆ ಬಳಿಕ ಇದು ಅಂತಿಮಗೊಳ್ಳಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...