alex Certify
ಕನ್ನಡ ದುನಿಯಾ       Mobile App
       

Kannada Duniya

ಉಸ್ತುವಾರಿ ಸಚಿವರಿಗೆ ಹೊಸ ಹೊಣೆ ವಹಿಸಿದ ಸಿ.ಎಂ.

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ಸಂಪುಟ ಸಭೆ ನಡೆಸಲಾಗಿದೆ. ವಿಧಾನಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಸಭೆಯಲ್ಲಿ ಯಾವುದೇ ಮಹತ್ವದ ವಿಷಯಗಳ ಚರ್ಚೆ ಆಗಿಲ್ಲ.

ವಿಧಾನಸಭೆ ಚುನಾವಣೆ ಘೋಷಣೆಯಾಗಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿ.ಎಂ. ಹೊಸ ಜವಾಬ್ದಾರಿ ವಹಿಸಿದ್ದಾರೆ. ಜಿಲ್ಲೆಗಳಲ್ಲಿನ ಎಲ್ಲಾ ಕ್ಷೇತ್ರಗಳಲ್ಲಿಯೂ ಪಕ್ಷವನ್ನು ಗೆಲ್ಲಿಸಲು ಕ್ರಮಕೈಗೊಳ್ಳಬೇಕೆಂದು ಅವರು ಸಚಿವರಿಗೆ ಸೂಚನೆ ನೀಡಿದ್ದಾರೆ.

ತಮ್ಮ ಕ್ಷೇತ್ರಗಳ ಜೊತೆಯಲ್ಲಿ ಉಳಿದ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕ್ರಮಕೈಗೊಳ್ಳಲು ತಿಳಿಸಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕೈಗೊಳ್ಳಬೇಕಿರುವ ಕಾರ್ಯತಂತ್ರಗಳ ಕುರಿತಾಗಿ ಸಭೆಯಲ್ಲಿ ಅವರು ಸಂಪುಟ ಸಹೋದ್ಯೋಗಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...