alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸಂಪುಟದಿಂದ 10 ಮಂದಿಗೆ ಕೊಕ್…!?

vidan soudah

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದು, 10 ಮಂದಿ ಸಚಿವರಿಗೆ ಕೊಕ್ ನೀಡಲಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ಪುನಾರಚನೆಗೆ ಈ ಹಿಂದೆಯೇ ಅವರು ತೀರ್ಮಾನಿಸಿದ್ದರೂ ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ.

ಈ ಹಿಂದೆಯೇ ಸಂಪುಟ ಪುನಾರಚನೆ ಮಾತು ಕೇಳಿಬಂದಿತ್ತಾದರೂ, ಗ್ರಾಮಪಂಚಾಯಿತಿ ಚುನಾವಣೆ, ವಿಧಾನಪರಿಷತ್ ಚುನಾವಣೆ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಮೊದಲಾದ ಕಾರಣದಿಂದ ಸಂಪುಟ ಪುನಾರಚನೆ ನೆನೆಗುದಿಗೆ ಬಿದ್ದಿತ್ತು. ಆಕಾಂಕ್ಷಿಗಳು ಸಂಪುಟ ಸೇರಲು ತುದಿಗಾಲಲ್ಲಿ ನಿಂತಿದ್ದರೂ ಸದ್ಯಕ್ಕೆ ಎಲ್ಲಾ ಸ್ಥಾನಗಳು ಭರ್ತಿಯಾಗಿವೆ. ಎಲ್ಲಕ್ಕಿಂತ ಮುಖ್ಯವಾಗಿ ಕೆಲವು ಸಚಿವರ ಕಾರ್ಯವೈಖರಿ ಬಗ್ಗೆ ಸ್ವಪಕ್ಷೀಯರಿಂದಲೇ ತೀವ್ರ ಆಕ್ಷೇಪದ ಮಾತುಗಳು ಕೇಳಿಬಂದಿವೆ.

ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿಯವರು, ಕೆಲ ಸಚಿವರ ಕುರಿತಂತೆ ಬಹಿರಂಗವಾಗಿಯೇ ಟೀಕೆ ಮಾಡಿದ್ದರು. ಇದು ಸೇರಿದಂತೆ ಕೆಲವಾರು ಕಾರಣಗಳಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟ ಪುನಾರಚನೆ ಮಾಡಲಿದ್ದು, ಪಂಚಾಯಿತಿ ಎಲೆಕ್ಷನ್, ಬಜೆಟ್ ಮುಗಿದ ಬಳಿಕ ಕನಿಷ್ಠ 10 ಮಂದಿ ಸಚಿವರಿಗೆ ಕೊಕ್ ನೀಡಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...