alex Certify
ಕನ್ನಡ ದುನಿಯಾ       Mobile App
       

Kannada Duniya

ಖಾಲಿ ಇರುವ 3 ಸಚಿವ ಸ್ಥಾನಗಳಿಗೆ ಲಾಬಿ

samputa-s

ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದ್ದು, ಸಚಿವ ಸಂಪುಟದಲ್ಲಿ 3 ಸ್ಥಾನ ಖಾಲಿ ಉಳಿದಿವೆ.

ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಪರಮೇಶ್ವರ್ ಮುಂದುವರೆಯಲಿರುವ ಹಿನ್ನಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಹಕಾರ ಸಚಿವ ಹೆಚ್.ಎಸ್. ಮಹಾದೇವಪ್ರಸಾದ್ ಅಕಾಲಿಕ ನಿಧನ ಮತ್ತು ಅಬಕಾರಿ ಸಚಿವರಾಗಿದ್ದ ಹೆಚ್.ವೈ. ಮೇಟಿ ಅವರು ಸಿ.ಡಿ. ಹಗರಣದಲ್ಲಿ ರಾಜೀನಾಮೆ ನೀಡಿದ್ದರು.

ಈಗ 3 ಸಚಿವ ಸ್ಥಾನಗಳು ಖಾಲಿ ಇರುವುದರಿಂದ ಮುಂದಿನ ತಿಂಗಳು ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ಆಕಾಂಕ್ಷಿಗಳು ಸಂಪುಟ ಸೇರಲು ಲಾಬಿ ಶುರು ಮಾಡಿದ್ದಾರೆ.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಸಚಿವರಾಗಲು ಪೈಪೋಟಿ ಶುರುವಾಗಿದ್ದು, ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...