alex Certify
ಕನ್ನಡ ದುನಿಯಾ       Mobile App
       

Kannada Duniya

ಮಲೆ ಮಹದೇಶ್ವರನ ಹೆಸರಲ್ಲಿ ಗೀತಾ ಪ್ರಮಾಣ

ಬೆಂಗಳೂರು: ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮೂವರು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ. ರೇವಣ್ಣ, ಆರ್.ಬಿ. ತಿಮ್ಮಾಪುರ ಸಂಪುಟ ದರ್ಜೆ ಸಚಿವರಾಗಿ, ಮಾಜಿ ಸಚಿವ ಮಹಾದೇವ ಪ್ರಸಾದ್ ಅವರ ಪತ್ನಿ ಮೋಹನಕುಮಾರಿ(ಗೀತಾ ಮಹದೇವಪ್ರಸಾದ್) ರಾಜ್ಯಖಾತೆ(ಸ್ವತಂತ್ರ) ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯಪಾಲ ವಜೂಭಾಯ್ ವಾಲಾ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಹೆಚ್.ಎಂ. ರೇವಣ್ಣ ಅವರಿಗೆ ಅರಣ್ಯ ಖಾತೆ, ತಿಮ್ಮಾಪುರ ಅವರಿಗೆ ಅಬಕಾರಿ ಖಾತೆ ಹಾಗೂ ಗೀತಾ ಮಹಾದೇವಪ್ರಸಾದ್ ಅವರಿಗೆ ಸಹಕಾರ ಖಾತೆ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ.

ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಅವರ ಬೆಂಬಲಿಗರು ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ ಪರಮೇಶ್ವರ್ ಗೈರು ಹಾಜರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...