alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರಾಗಿ ರೇವಣ್ಣ, ಗೀತಾ, ತಿಮ್ಮಾಪುರ

ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ರಾಜಭವನದಲ್ಲಿ ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ. ರೇವಣ್ಣ, ಆರ್.ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಮಹಾದೇವ ಪ್ರಸಾದ್ ಅವರ ಪತ್ನಿ ಗೀತಾ ಮಹದೇವಪ್ರಸಾದ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹೆಚ್.ಎಂ. ರೇವಣ್ಣ ಅವರಿಗೆ ಅರಣ್ಯ ಖಾತೆ, ತಿಮ್ಮಾಪುರ ಅವರಿಗೆ ಅಬಕಾರಿ ಖಾತೆ ಹಾಗೂ ಗೀತಾ ಮಹಾದೇವಪ್ರಸಾದ್ ಅವರಿಗೆ ಸಹಕಾರ ಖಾತೆ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ.

ಸಂಪುಟ ಸೇರಲಿದ್ದಾರೆ ಎನ್ನಲಾಗಿದ್ದ ತಿಪಟೂರು ಶಾಸಕ ಷಡಕ್ಷರಿ ಅವರಿಗೆ ನಿರಾಸೆಯಾಗಿದೆ. ಷಡಕ್ಷರಿ ಅವರ ಬದಲಿಗೆ ಗೀತಾ ಮಹದೇವಪ್ರಸಾದ್ ಸಂಪುಟ ಸೇರಲಿದ್ದಾರೆ.

ಇನ್ನು ಮಹತ್ವದ ಗೃಹ ಖಾತೆಯ ಜವಾಬ್ದಾರಿಯನ್ನು ಹಿರಿಯ ಸಚಿವರಾದ ರಮಾನಾಥ ರೈ, ಡಿ.ಕೆ. ಶಿವಕುಮಾರ್, ರಾಮಲಿಗಾರೆಡ್ಡಿ ಅವರಲ್ಲಿ ಯಾರಿಗೆ ವಹಿಸಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಮುಂದುವರೆದ ಕಾರಣ ಗೃಹ ಸಚಿವ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ್ ರಾಜೀನಾಮೆ ನೀಡಿದ್ದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದರೂ, ಕಾರಣಾಂತರದಿಂದ ಅದು ಕೈಗೂಡಿರಲಿಲ್ಲ. ಈಗ ಕಾಲ ಕೂಡಿ ಬಂದಿದೆ. ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಳ್ಳುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...