alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಸದ್ದಾಮ್ ಹುಸೇನ್, ಸದ್ದಾಂ, ತೌಸಿಫ್ ಅಹಮದ್ ಹಾಗೂ ಶಾರೂಕ್ ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಗಾಯಗೊಂಡ ಇಬ್ಬರನ್ನು ಹಿರಿಯೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡಿನ ಅಂಬೂರು ನಿವಾಸಿಗಳಾದ ಇವರುಗಳು, ಗೋವಾದಿಂದ ವಾಪಸ್ ತೆರಳುತ್ತಿದ್ದರೆಂದು ಹೇಳಲಾಗಿದ್ದು, ಇಂದು ಬೆಳಗಿನ ಜಾವ ಜವಗೊಂಡನಹಳ್ಳಿ ಬಳಿ ಈ ದುರ್ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...