alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳೆಯಿಂದ ಅಡ್ಡಾದಿಡ್ಡಿ ಕಾರು ಚಾಲನೆ: ವಿದ್ಯಾರ್ಥಿ ಸಾವು

accident 70-4322ಮಹಿಳೆಯೊಬ್ಬರು ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಪರಿಣಾಮ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದ್ದು, ಒಬ್ಬ ಮೃತಪಟ್ಟು ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಖಾಸಗಿ ಕಂಪನಿ ಉದ್ಯೋಗಿ ಅನಿತಾ ಎಂಬವರು ಕಾರು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಒಂದು ಹೋಂಡಾ ಅಕ್ಟೀವಾ ಹಾಗೂ ಒಂದು ಬೈಕ್ ಗೆ ಡಿಕ್ಕಿಯಾಗಿದೆ. ಇದರಿಂದ ಹೋಂಡಾ ಅಕ್ಟೀವಾದಲ್ಲಿದ್ದ ಗಂಗಾ ನಗರ ನಿವಾಸಿ 19 ವರ್ಷದ ಅರವಿಂದ್ ಸಾವನ್ನಪ್ಪಿದ್ದು, ಬೈಕ್ ನಲ್ಲಿದ್ದ ವಿಜಯ್ ಗೆ ಗಂಭೀರವಾದ ಗಾಯಗಳಾಗಿದೆ.

ಅಪಘಾತದಲ್ಲಿ ಅನಿತಾ ಅವರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ವಿಜಯ್ ಖಾಸಗಿ ಕಂಪನಿಯೊಂದರಲ್ಲಿ ಕಂಟ್ರಾಕ್ಟರ್ ಎನ್ನಲಾಗಿದೆ. ಅಪಘಾತದ ಸಂಬಂಧ ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...