alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಕಾರಿಗೆ ಶೆವರ್ಲೆಟ್ ಡಿಕ್ಕಿಯಾಗಿ ರಸ್ತೆಯಲ್ಲೇ ಹೊತ್ತಿ ಉರಿದ ವಾಹನಗಳು

ಬೆಂಗಳೂರು: ನಿಂತಿದ್ದ ಕಾರಿಗೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಬೆಂಗಳೂರು-ಮೈಸೂರು ನೈಸ್ ರಸ್ತೆಯ ಒಕ್ಕರಾ ಸೇತುವೆ ಬಳಿ ನಡೆದಿದೆ.

ಸ್ವಿಫ್ಟ್ ಕಾರಿನ ಚಾಲಕ ಮದ್ಯ ಸೇವಿಸಿ ಚಾಲನೆ ಮಾಡುತ್ತಿದ್ದ. ನೈಸ್ ರಸ್ತೆಯ ಒಕ್ಕರಾ ಸೇತುವೆ ಬಳಿ ಬರುತ್ತಿದ್ದಂತೆ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದೆ. ಈ ಕಾರಿನ ಹಿಂದೆ ಬರುತ್ತಿದ್ದ ಮತ್ತೊಂದು ಕಾರಿನ ಚಾಲಕ ರಸ್ತೆ ಮಧ್ಯದಲ್ಲಿಯೇ ತನ್ನ ಕಾರು ನಿಲ್ಲಿಸಿ ಹಳ್ಳಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಇದೇ ವೇಳೆ ಎದುರಿಗೆ ಬಂದ ಶೆವರ್ಲೆಟ್ ಕಾರು ರಸ್ತೆ ಮಧ್ಯೆ ನಿಂತಿದ್ದ ಕಾರಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ನೋಡ ನೋಡುತ್ತಿದ್ದಂತೆಯೇ ಕಾರುಗಳು ಹೊತ್ತಿ ಉರಿದಿವೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇನ್ನು ಹಳ್ಳಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ಟಾರ್ಚ್ ಹಿಡಿದು ಪತ್ತೆ ಮಾಡಿ ಮೇಲಕ್ಕೆತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...