alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿ ಪುಡಿ

ಮನೆ ಮುಂದೆ ನಿಲ್ಲಿಸಿದ್ದ 10 ಕ್ಕೂ ಅಧಿಕ ಕಾರು ಹಾಗೂ ಟೆಂಪೋಗಳ ಗಾಜನ್ನು ಕಿಡಿಗೇಡಿಗಳು ಪುಡಿ ಪುಡಿ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯ ತ್ಯಾಗರಾಜ ನಗರದಲ್ಲಿ ಈ ಘಟನೆ ನಡೆದಿದ್ದು, ಕಳೆದ ರಾತ್ರಿ ಕರೆಂಟ್ ಹೋದ ಸಂದರ್ಭದಲ್ಲಿ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಸ್ಥಳಕ್ಕೆ ಸಿ.ಕೆ. ಅಚ್ಚುಕಟ್ಟು ಠಾಣೆ ಪೊಲೀಸರು ಭೇಟಿ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಪ್ರದೇಶದಲ್ಲಿ ಕಿಡಿಗೇಡಿಗಳು ಆಗಾಗ ಇಂತಹ ಕೃತ್ಯವೆಸಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...