alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರ ಸಾವು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿ ನಡೆದಿದೆ.

ಹರಿಹರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಹನಗವಾಡಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ, ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಇದರಿಂದ ಕಾರಿನಲ್ಲಿದ್ದ ಖಾಸಗಿ ವಾಹಿನಿಯೊಂದರ ನಿರೂಪಕ 34 ವರ್ಷದ ಚಂದ್ರಶೇಖರ್ ಹಾಗೂ 24 ವರ್ಷದ ಸಂತೋಷಿ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಮತ್ತಿಬ್ಬರಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರುಗಳು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...