alex Certify
ಕನ್ನಡ ದುನಿಯಾ       Mobile App
       

Kannada Duniya

ಬಳ್ಳಾರಿಯಲ್ಲಿ ಕಾರುಗಳ ಗಾಜು ಪೀಸ್ ಪೀಸ್

crime 78 nmklop

ಬಳ್ಳಾರಿ: ರಾಜ್ಯದಲ್ಲಿ ಇತ್ತೀಚೆಗೆ ಮನೆಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಿಡಿಗೇಡಿಗಳು ಕಲ್ಲು ತೂರಿ ಹಾಳು ಮಾಡುವ, ಬೆಂಕಿ ಹಚ್ಚುವ ಘಟನೆ ಮರುಕಳಿಸುತ್ತಿವೆ. ತಡರಾತ್ರಿ ದುಷ್ಕರ್ಮಿಗಳ ಗುಂಪೊಂದು ಹತ್ತಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಗಾಂಧಿನಗರ ಬಡಾವಣೆಯಲ್ಲಿ ದುಷ್ಕರ್ಮಿಗಳು ಐಷಾರಾಮಿ ಕಾರೂ ಸೇರಿದಂತೆ ಹಲವು ವಾಹನಗಳ ಮೇಲೆ ಕಲ್ಲು ತೂರಿದ್ದಾರೆ. ಗ್ಲಾಸ್ ಗಳನ್ನು ಒಡೆದುಹಾಕಿದ್ದಾರೆ. ಕಾರುಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಹತ್ತಕ್ಕೂ ಹೆಚ್ಚು ಕಾರ್ ಗಳು ಹಾನಿಗೀಡಾಗಿವೆ. ಕಾರುಗಳ ಗಾಜು ಒಡೆದ ಶಬ್ಧ ಕೇಳಿ ಮನೆಯವರು ಹೊರಗೆ ಬರುವಷ್ಟರಲ್ಲಿ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ದುಷ್ಕರ್ಮಿಗಳ ಗುಂಪೊಂದು ಕಾರ್ ಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಕಾರ್ ಗಳು ಹಾನಿಗೆ ಒಳಗಾಗಿವೆ. ಈಗಾಗಲೇ ಕ್ರಮಕೈಗೊಂಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...