alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರು ಕದಿಯಲು ಬಂದು ಯಡವಟ್ಟು ಮಾಡಿಕೊಂಡ ಕಳ್ಳ…!

ಕಾರನ್ನು ಕದಿಯಲು ಬಂದ ಕಳ್ಳನೊಬ್ಬ ಯಡವಟ್ಟು ಮಾಡಿಕೊಂಡಿದ್ದಾನೆ. ಕದ್ದ ಕಾರನ್ನು ಮರಕ್ಕೆ ಡಿಕ್ಕಿ ಹೊಡೆಸಿದ್ದು, ಬಳಿಕ ಕಾರು ಬಿಟ್ಟು ಕುಂಟಿಕೊಂಡು ಪರಾರಿಯಾಗಿದ್ದಾನೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಹೆಲ್ತ್ ಲೇ ಔಟ್ ನಲ್ಲಿ ಈ ಘಟನೆ ನಡೆದಿದ್ದು, ಪ್ರಕಾಶ್ ಎಂಬವರು ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಈ ಕಳ್ಳ ಕದಿಯಲು ಮುಂದಾಗಿದ್ದಾನೆ.

ಕಾರನ್ನು ಕಳ್ಳ ಸ್ಟಾರ್ಟ್ ಮಾಡುತ್ತಿದ್ದಂತೆ ಶಬ್ದ ಕೇಳಿದ ಪ್ರಕಾಶ್ ಮನೆಯಿಂದ ಹೊರ ಬಂದಿದ್ದಾರೆ. ಕಾರು ಮಾಲೀಕರನ್ನು ಕಂಡ ಕೂಡಲೇ ಗಾಬರಿಗೊಂಡ ಕಳ್ಳ, ಅಡ್ಡಾದಿಡ್ಡಿಯಾಗಿ ಕಾರು ಓಡಿಸಿಕೊಂಡು ಹೋಗಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ನಂತರ ಕಾರನ್ನು ಅಲ್ಲಿಯೇ ಬಿಟ್ಟು ಕುಂಟಿಕೊಂಡು ಪರಾರಿಯಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...