alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಮಾಣವಚನ ಸ್ವೀಕಾರ ಸಮಾರಂಭದ ವೇಳೆ ಭದ್ರತಾ ಲೋಪ

ಬುಧವಾರ ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಸಮಾರಂಭಕ್ಕೆ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ನಾಯಕರುಗಳು ಆಗಮಿಸಿದ್ದು, ಇವರುಗಳ ರಕ್ಷಣೆಯ ಹೊಣೆ ಹೊತ್ತಿದ್ದ ಪೊಲೀಸರು ಭದ್ರತೆ ನೀಡುವಲ್ಲಿ ವಿಫಲರಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾರಂಭದ ಸ್ಥಳಕ್ಕೆ ಬರುವ ವೇಳೆ ಅವರಿದ್ದ ಕಾರು ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿದ್ದು, ಕಡೆಗೆ ವಿಧಿ ಇಲ್ಲದೆ ಅವರು ಸ್ವಲ್ಪ ದೂರ ನಡೆದುಕೊಂಡು ಬಂದಿದ್ದರು.

ಭದ್ರತಾ ಲೋಪ ಕುರಿತಂತೆ ವೇದಿಕೆಯಲ್ಲೇ ಅವರು, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಬಳಿ ತಮ್ಮ ಅಸಮಾಧಾನ ತೋಡಿಕೊಂಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಇಂದು ಬೆಳಗ್ಗೆ ತಮ್ಮ ಜೆಪಿ ನಗರದ ನಿವಾಸಕ್ಕೆ ಭೇಟಿ ನೀಡಿದ್ದ ಡಿಜಿ-ಐಜಿಪಿ ನೀಲಮಣಿರಾಜು ಹಾಗೂ ಗುಪ್ತಚರ ಇಲಾಖೆ ಎಡಿಜಿಪಿ ಅಮರ್ ಕುಮಾರ್ ಜೊತೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...