alex Certify
ಕನ್ನಡ ದುನಿಯಾ       Mobile App
       

Kannada Duniya

ಕೂದಲೆಳೆ ಅಂತರದಲ್ಲಿ ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರು

ಸಿಸಿ ಟಿವಿಯಲ್ಲಿ ಸೆರೆಯಾಗಿರುವ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸ್ಕೂಟರ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿರುವ ದೃಶ್ಯ ಇದರಲ್ಲಿ ಸೆರೆಯಾಗಿದೆ.

ವಿಟ್ಲದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್ ಸವಾರರೊಬ್ಬರು ಮಾರುತಿ ವ್ಯಾನ್ ಅನ್ನು ಹಿಂದಿಕ್ಕುವ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ.

ಇದೇ ಸಂದರ್ಭದಲ್ಲಿ ಎದುರಿನಿಂದ ಬಸ್ಸೊಂದು ವೇಗವಾಗಿ ಬಂದಿದ್ದು, ಸ್ಕೂಟರ್ ನೇರವಾಗಿ ಬಸ್ ಚಕ್ರದಡಿ ಹೋದರೆ ಸವಾರ, ಪವಾಡಸದೃಶ ರೀತಿಯಲ್ಲಿ ಮಾರುತಿ ವ್ಯಾನ್ ಹಾಗೂ ಬಸ್ ನಡುವಿನ ಜಾಗದಲ್ಲಿ ಬಿದ್ದಿದ್ದಾರೆ. ಅವರಿಗೆ ತರಚಿದ ಗಾಯ ಬಿಟ್ಟು ಯಾವುದೇ ಅಪಾಯವಾಗಿಲ್ಲ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...