alex Certify
ಕನ್ನಡ ದುನಿಯಾ       Mobile App
       

Kannada Duniya

ಶಕ್ತಿ ಪ್ರದರ್ಶನದ ನಂತರ ಸಹಜ ಸ್ಥಿತಿ

kaveri

ಬೆಂಗಳೂರು: ಕಾವೇರಿ ನದಿ ನೀರಿನ ಕುರಿತಾಗಿ ಶುಕ್ರವಾರ ನಡೆದ ಕರ್ನಾಟಕ ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದ್ದು, ಕನ್ನಡಿಗರ ಶಕ್ತಿ ಪ್ರದರ್ಶನ ಅನಾವರಣಗೊಂಡಿದೆ.

ಬೆಳಿಗ್ಗೆಯಿಂದ ಸಂಜೆಯವರೆಗೆ ಕರ್ನಾಟಕ ಸ್ತಬ್ಧವಾಗಿತ್ತು. ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ರಾಜ್ಯದ ಸುಮಾರು 900 ಕ್ಕೂ ಅಧಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ ನಲ್ಲಿ ರೈತರು, ಕನ್ನಡ ಪ್ರೇಮಿಗಳು, ಚಿತ್ರರಂಗ, ಪೆಟ್ರೋಲ್ ಬಂಕ್, ಟ್ಯಾಕ್ಸಿ, ಲಾರಿ, ಆಟೋ ಚಾಲಕರ ಸಂಘಟನೆಗಳು ಸೇರಿದಂತೆ ಹಲವಾರು ಸಂಘ, ಸಂಸ್ಥೆಗಳು, ಸಂಘಟನೆಗಳು ಬಂದ್ ಬೆಂಬಲಿಸಿದ್ದವು.

ಅಪಾರ ಸಂಖ್ಯೆಯ ಜನ ಕಾವೇರಿಗಾಗಿ ನಡೆದ ಹೋರಾಟದಲ್ಲಿ ಭಾಗವಹಿಸಿ, ಕನ್ನಡಿಗರ ಶಕ್ತಿ ಪ್ರದರ್ಶನ ತೋರಿದ್ದಾರೆ. ತಮ್ಮದೇ ಆದ ರೀತಿಯಲ್ಲಿ ಪ್ರತಿಭಟನೆಯನ್ನು ದಾಖಲಿಸಿದ್ದಾರೆ. ಸಂಜೆಯ ನಂತರ ಬಹುತೇಕ ಎಲ್ಲಾ ಸೇವೆಗಳು ಆರಂಭವಾಗಿದ್ದು, ಸಹಜ ಸ್ಥಿತಿಯತ್ತ ಮರಳಿದೆ. ಬಸ್, ಅಂಗಡಿ, ಪೆಟ್ರೋಲ್ ಬಂಕ್ ಮೊದಲಾದವು ಆರಂಭವಾಗಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...