alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಮಾಜಿಕ ತಾಣಗಳ ಸಂದೇಶಗಳನ್ನೆಲ್ಲ ನಂಬಬೇಡಿ: ಪೊಲೀಸರ ಮನವಿ

Don't blindly believe messages on social media, say Bengaluru Policeಕಾವೇರಿ ವಿವಾದದಲ್ಲಿ ಬೆಂಗಳೂರು ಬೂದಿ ಮುಚ್ಚಿದ ಕೆಂಡದಂತಿದೆ. ಕಿಡಿಗೇಡಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಲು ಯತ್ನಿಸುವ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸಂದೇಶಗಳನ್ನೆಲ್ಲ ನಂಬಬೇಡಿ ಅಂತಾ ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಕಿವಿಮಾತು ಹೇಳಿದ್ದಾರೆ.

ಯಾವುದೇ ಅನುಮಾನಗಳಿದ್ದಲ್ಲಿ 100ಕ್ಕೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಅಷ್ಟೇ ಅಲ್ಲ @BlrCityPolice ಮೂಲಕ ಬೆಂಗಳೂರು ಪೊಲೀಸರಿಗೆ ನೀವು ಟ್ವೀಟ್ ಕೂಡ ಮಾಡಬಹುದು.  9480801000 ಸಂಖ್ಯೆಗೆ ವಾಟ್ಸಾಪ್ ಸಂದೇಶ ಕಳುಹಿಸಬಹುದು. ನಗರದಾದ್ಯಂತ ಸಿವಿಲ್, ಸಿಎಆರ್, ಟ್ರಾಫಿಕ್, ಕೆ.ಎಸ್.ಆರ್.ಪಿ. ಸೇರಿದಂತೆ 15000 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಕಾವೇರಿ ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಡಲೇಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಓರ್ವ ಬಲಿಯಾಗಿದ್ದು, ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ಮತ್ತೊಬ್ಬ ಇಂದು ಸಾವನ್ನಪ್ಪಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...