alex Certify
ಕನ್ನಡ ದುನಿಯಾ       Mobile App
       

Kannada Duniya

ಕಾವೇರಿ ವೀಕ್ಷಣೆಗೆ ಅಧ್ಯಯನ ತಂಡ

cauve-nm

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ, ಅಧ್ಯಯನ ನಡೆಸಲು ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದೆ.

ಆಯೋಗದ ಸದಸ್ಯ ಎಸ್. ಮಸೂದ್, ಗೋದಾವರಿ-ಕೃಷ್ಣ ಕೊಳ್ಳದ ಮುಖ್ಯ ಇಂಜಿನಿಯರ್ ಗುಪ್ತಾ, ಕರ್ನಾಟಕ, ತಮಿಳುನಾಡು, ಕೇರಳ, ಪಾಂಡಿಚೇರಿಯ ಮುಖ್ಯ ಇಂಜಿನಿಯರ್ ಗಳನ್ನೊಳಗೊಂಡ ಅಧ್ಯಯನ ತಂಡ, ಬೆಂಗಳೂರಿನಲ್ಲಿ ನಾಳೆ ಬೆಳಿಗ್ಗೆ ಸಭೆ ನಡೆಸಿ, ಅಧ್ಯಯನ ಪ್ರವಾಸ ಆರಂಭಿಸಲಿದೆ. ಕಾವೇರಿ ಜಲಾನಯನ ಪ್ರದೇಶ, ಜಲಾಶಯಗಳ ನೀರಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದೆ.

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾವೇರಿ ಕೊಳ್ಳದ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸಿದ ನಂತರ ಅಕ್ಟೋಬರ್ 17 ರಂದು ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಲಿದೆ. 18 ರಂದು ಕಾವೇರಿ ನದಿ ನೀರಿನ ವಿಚಾರಣೆ ನಡೆಯಲಿದೆ.

ಅಧ್ಯಯನ ತಂಡಕ್ಕೆ ಕಾವೇರಿ ಜಲಾನಯನ ಪ್ರದೇಶದ ವಾಸ್ತವ ಸ್ಥಿತಿಗತಿಗಳ ಬಗ್ಗೆ, ಅಗತ್ಯ ಮಾಹಿತಿ ನೀಡುವಂತೆ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...