alex Certify
ಕನ್ನಡ ದುನಿಯಾ       Mobile App
       

Kannada Duniya

ಅಧ್ಯಯನ ತಂಡದಿಂದ ಕಾವೇರಿ ಕೊಳ್ಳ ವೀಕ್ಷಣೆ

cauvery-man

ಬೆಂಗಳೂರು : ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಕೇಂದ್ರ ಅಧ್ಯಯನ ತಂಡ ಕಾವೇರಿ ಕೊಳ್ಳದಲ್ಲಿ ಪ್ರವಾಸ ಕೈಗೊಂಡಿದೆ.

ಮೊದಲ ದಿನ ಅಧ್ಯಯನ ತಂಡ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ವಿವಿಧ ಕಡೆಗಳಲ್ಲಿ ನೀರಿನ ಸ್ಥಿತಿಗತಿಗಳ ವಾಸ್ತವತೆಯನ್ನು ಅರಿಯಿತು. ನೀರಿಲ್ಲದೇ ಬರಿದಾದ ಕಾಲುವೆ, ಕೆರೆ ಕಟ್ಟೆಗಳನ್ನು ವೀಕ್ಷಿಸಿದ ತಂಡ ರೈತರಿಂದಲೂ ಮಾಹಿತಿ ಪಡೆದುಕೊಂಡಿತು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ಜೊತೆಗಿದ್ದು, ತಂಡಕ್ಕೆ ಅಗತ್ಯವಾದ ಮಾಹಿತಿ ಒದಗಿಸಿಕೊಟ್ಟಿದ್ದಾರೆ.

ರಾತ್ರಿ ಕೆ.ಆರ್.ಎಸ್. ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿರುವ ಅಧ್ಯಯನ ತಂಡದ ಮುಖ್ಯಸ್ಥ ಜಿ.ಎಸ್. ಝಾ ಮೊದಲಾದವರು ಬೆಳಿಗ್ಗೆ ಕೆ.ಆರ್.ಎಸ್. ಡ್ಯಾಂ ವೀಕ್ಷಣೆ ಮಾಡಲಿದ್ದಾರೆ.

ಅಲ್ಲಿಂದ ಪಾಂಡವಪುರ ತಾಲ್ಲೂಕಿಗೆ ಭೇಟಿ ನೀಡಲಿದ್ದು, ಮಧ್ಯಾಹ್ನ ಹಾಸನ ಜಿಲ್ಲೆ ಹೇಮಾವತಿ ಜಲಾಶಯಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದು, ರಾತ್ರಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...