alex Certify
ಕನ್ನಡ ದುನಿಯಾ       Mobile App
       

Kannada Duniya

ಪರಿಸ್ಥಿತಿ ಉಲ್ಬಣಿಸಲು ಕಾರಣವಾಯ್ತು ಆ ವಿಡಿಯೋ

tn tn tnಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶುಕ್ರವಾರದಂದು ಕರೆ ನೀಡಿದ್ದ ‘ಕರ್ನಾಟಕ ಬಂದ್’ ಅಭೂತಪೂರ್ವ ಯಶಸ್ಸು ಕಾಣುವುದರ ಜೊತೆಗೆ ಶಾಂತಿಯುತವಾಗಿ ನಡೆದಿತ್ತು. ಆದರೆ ಇಂದು ತಮಿಳುನಾಡಿನಲ್ಲಿ ನಡೆದ ಘಟನೆಯೊಂದರ ವಿಡಿಯೋ ಹರಿದಾಡುತ್ತಿದ್ದಂತೆಯೇ ಪರಿಸ್ಥಿತಿ ಉಲ್ಬಣಗೊಳ್ಳಲು ಕಾರಣವಾಯ್ತು.

ಇಂದು ಬೆಳಿಗ್ಗೆ ಕನ್ನಡಿಗರಿಗೆ ಸೇರಿದ ನ್ಯೂ ವುಡ್ ಲ್ಯಾಂಡ್ಸ್ ಹೋಟೆಲ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದ ದುಷ್ಕರ್ಮಿಗಳು ಕರಪತ್ರವೊಂದನ್ನು ಹಾಕಿದ್ದರು. ಅದರ ಜೊತೆಗೆ ರಾಮೇಶ್ವರಂನಲ್ಲಿ ಕಾವೇರಿ ವಿಚಾರಕ್ಕೆ ಬಂದ್ರೆ ಎಚ್ಚರಿಕೆ, ಕಾವೇರಿ ತಮಿಳುನಾಡಿಗೆ ಸೇರಿದ್ದು ಎಂದು 4-5 ಮಂದಿ ಕಿಡಿಗೇಡಿಗಳು ಹೇಳುತ್ತಾ, ಕನ್ನಡಿಗ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ್ದು, ಕೈ ಮುಗಿದು ಬೇಡಿಕೊಂಡರೂ, ಕರುಣೆ ತೋರದೇ ಹಲ್ಲೆ ಮಾಡಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆಯೇ ಕನ್ನಡಿಗರ ಆಕ್ರೋಶ ಭುಗಿಲೆದ್ದಿತ್ತು. ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯಲ್ಲಿ ಸೆಪ್ಟೆಂಬರ್ 20 ರವರೆಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದ್ದು, ಆಕ್ರೋಶಕ್ಕೆ ಮತ್ತಷ್ಟು ತುಪ್ಪ ಸುರಿದಂತಾಯಿತು. ಇದೀಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ತಮಿಳುನಾಡು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ತಮಿಳುನಾಡಿನಲ್ಲಿರುವ ಕನ್ನಡಿಗರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೇ ರಾಜ್ಯದಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ರಾಜ್ಯದ ತಮಿಳರೂ ಸಹ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...