alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ.ಕೆ.ರವಿ ತಾಯಿ ಕಣ್ಣೀರು, ಮೌನಕ್ಕೆ ಶರಣಾದ ತಂದೆ

raviತುಮಕೂರು: ದಕ್ಷ ಐ.ಎ.ಎಸ್. ಅಧಿಕಾರಿ ಡಿ.ಕೆ. ರವಿ ಅವರ ಸಾವಿನ ಪ್ರಕರಣದ ತನಿಖೆ ನಡೆಸಿದ ಸಿ.ಬಿ.ಐ., 20 ತಿಂಗಳ ಬಳಿಕ ಅಂತಿಮ ವರದಿ ಸಲ್ಲಿಸಿದೆ.

ವರದಿಯಲ್ಲಿ ಡಿ.ಕೆ. ರವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ನಿರ್ಧಾರಕ್ಕೆ ಬಂದಿರುವುದಾಗಿ ವರದಿಯಾದ ಬಳಿಕ ಅವರ ತಾಯಿ ಗೌರಮ್ಮ, ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ತಮ್ಮ ಮಗನ ಸಾವಿಗೆ ಸಿ.ಬಿ.ಐ. ನಿಂದ ನ್ಯಾಯ ಸಿಕ್ಕಿಲ್ಲ ಎಂದು ಹೇಳಿದ್ದು, ಆತ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ದುರ್ಬಲನಾಗಿರಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ರವಿ ಅವರ ತಂದೆ ಕರಿಯಪ್ಪ ಮೌನಕ್ಕೆ ಜಾರಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿರುವ ಡಿ.ಕೆ. ರವಿ ಅವರ ಸಮಾಧಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಭದ್ರತೆ ಒದಗಿಸಲಾಗಿದೆ.

ಡಿ.ಕೆ. ರವಿ ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಯಾರೂ ಸಂಚು ರೂಪಿಸಿಲ್ಲ ಎಂದು ಸಿ.ಬಿ.ಐ. ಅಭಿಪ್ರಾಯಪಟ್ಟಿದ್ದು, ಇದಕ್ಕೆ ಹಾಸಿಗೆ ಹಿಡಿದಿರುವ ರವಿ ತಾಯಿ ಗೌರಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...